2 Peter 1:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.
Kannada BSI Bible 2016
ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.
Kannada Bible (KNCL) BSI 2016
ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.