2 Peter 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸುಕ್ರಿಸ್ತನ ರಾಜ್ಯದಲ್ಲಿ ನಿಮಗೆ ಮಹಾ ಸ್ವಾಗತವನ್ನು ನೀಡಲಾಗುವುದು. ಆ ರಾಜ್ಯವು ಶಾಶ್ವತವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.
Kannada BSI Bible 2016
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು.
Kannada Bible (KNCL) BSI 2016
ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.