2 Peter 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವೆಲ್ಲವೂ ನಿಮಗೆ ತಿಳಿದಿದೆ. ನಿಮ್ಮಲ್ಲಿರುವ ಸತ್ಯದಲ್ಲಿ ನೀವು ಸ್ಥಿರವಾಗಿದ್ದೀರಿ. ಆದರೆ ಇವುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳುವಂತೆ ನಾನು ನಿಮಗೆ ಯಾವಾಗಲೂ ಸಹಾಯ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.
Kannada BSI Bible 2016
ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರಕಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.
Kannada Bible (KNCL) BSI 2016
ಈ ವಿಷಯಗಳೆಲ್ಲಾ ನಿಮಗೆ ತಿಳಿದೇ ಇವೆ; ನೀವು ಅಂಗೀಕರಿಸಿದ ಸತ್ಯದಲ್ಲಿ ಸ್ಥಿರವಾಗಿಯೂ ಇದ್ದೀರಿ. ಆದರೂ ಇವುಗಳನ್ನು ಪದೇ ಪದೇ ನಿಮ್ಮ ಜ್ಞಾಪಕಕ್ಕೆ ತರಲು ಅಪೇಕ್ಷಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.