2 Peter 1:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಬಹುಬೇಗ ಈ ದೇಹವನ್ನು ತ್ಯಜಿಸಬೇಕೆಂಬುದೂ ನನಗೆ ತಿಳಿದಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಅದನ್ನು ತೋರ್ಪಡಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.
Kannada BSI Bible 2016
ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ಈ ಗುಡಾರವನ್ನು ಕಿತ್ತುಹಾಕುವ ಕಾಲ ಬೇಗನೇ ಬರುತ್ತದೆಂದು ಬಲ್ಲೆನು.
Kannada Bible (KNCL) BSI 2016
ನಾನು ಈ ಗುಡಾರವನ್ನು ತ್ಯಜಿಸುವ ಕಾಲವು ಸಮೀಪಿಸಿತೆಂದು ಬಲ್ಲೆ. ನಮ್ಮ ಪ್ರಭು ಯೇಸುಕ್ರಿಸ್ತರೇ ನನಗಿದನ್ನು ಸ್ಪಷ್ಟಪಡಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು.