2 Peter 1:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಇವುಗಳನ್ನು ಯಾವಾಗಲೂ ನೆನಪು ಮಾಡಿಕೊಳ್ಳಲು ನಿಮಗೆ ನನ್ನಿಂದಾದಷ್ಟು ಸಹಾಯಮಾಡಲು ನಾನು ಪ್ರಯತ್ನಿಸುತ್ತೇನೆ. ನಾನು ಈ ಲೋಕವನ್ನು ಬಿಟ್ಟುಹೋದ ನಂತರವೂ ನೀವು ಈ ಸಂಗತಿಗಳನ್ನು ನೆನಪು ಮಾಡಿಕೊಳ್ಳಲು ಸಮರ್ಥರಾಗಿರಬೇಕೆಂಬುದು ನನ್ನ ಅಪೇಕ್ಷೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.
Kannada BSI Bible 2016
ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
Kannada Bible (KNCL) BSI 2016
ನನ್ನ ಮರಣಾ ನಂತರವೂ ಈ ವಿಷಯಗಳನ್ನು ನೀವು ಯಾವಾಗಲೂ ಜ್ಞಾಪಕಕ್ಕೆ ತಂದುಕೊಳ್ಳಲು ಸಾಧ್ಯವಾಗುವಂತೆ ಈಗಲೇ ನನ್ನಿಂದಾದಷ್ಟು ಪ್ರಯತ್ನಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.