2 Peter 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.
Kannada BSI Bible 2016
ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ಮೆಚ್ಚಿದ್ದೇನೆ ಎಂಬಂಥ ವಾಣಿಯು ಸರ್ವೋತ್ಕೃಷ್ಟಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಘನಮಾನಗಳನ್ನು ಹೊಂದಿದನಲ್ಲವೇ.
Kannada Bible (KNCL) BSI 2016
ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿಯು ಮಹೋನ್ನತ ಮಹಿಮೆಯಿಂದ ಅವರಿಗೆ ಉಂಟಾದದ್ದರಲ್ಲಿ ಅವರು ತಂದೆ ದೇವರಿಂದ ಗೌರವವನ್ನೂ ಮಹಿಮೆಯನ್ನೂ ಹೊಂದಿದರಲ್ಲವೇ.