2 Peter 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ದೇವರನ್ನು ಮತ್ತು ನಮ್ಮ ಪ್ರಭುವಾದ ಯೇಸುವನ್ನು ನೀವು ನಿಜವಾಗಿಯೂ ತಿಳಿದಿರುವುದರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.
Kannada BSI Bible 2016
ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ನಿಮಗೆ ಹೆಚ್ಚೆಚ್ಚಾಗಿ ದೊರೆಯಲಿ.
Kannada Bible (KNCL) BSI 2016
ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ವಿಷಯವಾಗಿಯೂ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿಯೂ ಇರುವ ತಿಳುವಳಿಕೆಯ ಮೂಲಕ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.