2 Peter 1:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಅರ್ಥಮಾಡಿಕೊಳ್ಳಬೇಕಾದ ಮುಖ್ಯವಾದ ಸಂಗತಿಯೇನೆಂದರೆ, ಪವಿತ್ರ ಗ್ರಂಥದಲ್ಲಿರುವ ಯಾವ ಪ್ರವಾದನವಾಕ್ಯವೂ ಒಬ್ಬ ವ್ಯಕ್ತಿಯ ವೈಯಕ್ತಿಕ ವಿವರಣೆಯಿಂದ ಬಂದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.
Kannada BSI Bible 2016
ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಸ್ತ್ರದಲ್ಲಿರುವ ಯಾವ ಪ್ರವಾದನವಾಕ್ಯವೂ ಕೇವಲ ಮಾನುಷಬುದ್ಧಿಯಿಂದ ವಿವರಿಸತಕ್ಕಂಥದಲ್ಲವೆಂಬದನ್ನು ಮುಖ್ಯವಾಗಿ ತಿಳಿದುಕೊಳ್ಳಿರಿ.
Kannada Bible (KNCL) BSI 2016
ಆದರೆ, ಇದನ್ನು ನೀವು ಮುಖ್ಯವಾಗಿ ಜ್ಞಾಪಕದಲ್ಲಿಡಬೇಕು: ಪವಿತ್ರಗ್ರಂಥದಲ್ಲಿರುವ ಯಾವ ಪ್ರವಾದನೆಯೂ ವೈಯಕ್ತಿಕ ವ್ಯಾಖ್ಯಾನದ ವಿಷಯವಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರ ವೇದದ ಯಾವ ಪ್ರವಾದನೆಯೂ ಕೇವಲ ಪ್ರವಾದಿಗಳಿಂದ ಸ್ವಂತವಾಗಿ ವಿವರಿಸತಕ್ಕದ್ದಲ್ಲ ಎಂಬುದನ್ನು ಮೊದಲು ತಿಳಿದುಕೊಳ್ಳಿರಿ.