2 Peter 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿಗೆ ದೇವರ ಶಕ್ತಿಯಿದೆ. ಜೀವಿಸಲು ಮತ್ತು ದೇವರ ಸೇವೆ ಮಾಡಲು ಬೇಕಾದ ಪ್ರತಿಯೊಂದನ್ನು ಆತನ ಶಕ್ತಿಯು ನಮಗೆ ಒದಗಿಸಿದೆ. ನಾವು ಆತನನ್ನು ಬಲ್ಲವರಾದ್ದರಿಂದಲೇ ಅವುಗಳನ್ನು ಪಡೆದುಕೊಂಡಿದ್ದೇವೆ. ಯೇಸು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ನಮ್ಮನ್ನು ಕರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.
Kannada BSI Bible 2016
ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.
Kannada Bible (KNCL) BSI 2016
ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.