2 Peter 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
Kannada BSI Bible 2016
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
Kannada Bible (KNCL) BSI 2016
ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.