2 Peter 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವೆಲ್ಲವೂ ನಿಮ್ಮಲ್ಲಿದ್ದು ಬೆಳೆಯುತ್ತಿದ್ದರೆ, ನೀವು ಎಂದಿಗೂ ನಿರರ್ಥಕರಾಗದಂತೆ ಇವು ನಿಮಗೆ ಸಹಾಯ ಮಾಡುತ್ತವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಜ್ಞಾನದಲ್ಲಿ ಎಂದಿಗೂ ಅಯೋಗ್ಯರೆನಿಸಿಕೊಳ್ಳದಂತೆ ಇವು ನಿಮಗೆ ಸಹಾಯಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.
Kannada BSI Bible 2016
ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸಂಬಂಧವಾದ ಪರಿಜ್ಞಾನವನ್ನು ಹೊಂದುವ ವಿಷಯದಲ್ಲಿ ನಿಮ್ಮನ್ನು ಆಲಸ್ಯಗಾರರೂ ನಿಷ್ಫಲರೂ ಆಗದಂತೆ ಮಾಡುತ್ತವೆ.
Kannada Bible (KNCL) BSI 2016
ಈ ಗುಣಗಳು ನಿಮ್ಮಲ್ಲಿ ಬೆಳೆದು ಸಮೃದ್ಧವಾಗಿದ್ದರೆ, ನಮ್ಮ ಪ್ರಭು ಯೇಸುಕ್ರಿಸ್ತರನ್ನು ಅರಿತು ಬಾಳುವುದರಲ್ಲಿ ಇವು ನಿಮ್ಮನ್ನು ಚೈತನ್ಯಪೂರ್ಣರನ್ನಾಗಿಯೂ ಫಲಪ್ರದರನ್ನಾಗಿಯೂ ಮಾಡುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಗುಣಗಳು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ, ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅರಿತುಕೊಳ್ಳುವುದರಲ್ಲಿ ನೀವು ನಿಷ್ಪ್ರಯೋಜಕರೂ ನಿಷ್ಫಲರೂ ಆಗದಂತೆ ಮಾಡುತ್ತವೆ.