2 Peter 2:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
Kannada BSI Bible 2016
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.
Kannada Bible (KNCL) BSI 2016
ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.