2 Peter 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದೂತರು ಈ ಸುಳ್ಳುಬೋಧಕರಿಗಿಂತ ಹೆಚ್ಚು ಬಲಿಷ್ಠರಾಗಿದ್ದಾರೆ ಮತ್ತು ಹೆಚ್ಚು ಶಕ್ತಿಯುಳ್ಳವರಾಗಿದ್ದಾರೆ. ಆದರೂ ದೇವದೂತರು ಸುಳ್ಳುಬೋಧಕರನ್ನು ಪ್ರಭುವಿನ ಸನ್ನಿಧಿಯಲ್ಲಿ ದೂಷಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
Kannada BSI Bible 2016
ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಮಹಾಪದವಿಯವರ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಿಲ್ಲವಲ್ಲಾ.
Kannada Bible (KNCL) BSI 2016
ಈ ಕಳ್ಳಬೋಧಕರು ಉದ್ಧಟರು, ಸ್ವೇಚ್ಛಾಪರರು, ಸ್ವರ್ಗನಿವಾಸಿಗಳನ್ನು ದೂಷಿಸುವವರು. ದೇವದೂತರು ಶಕ್ತಿಯಲ್ಲಿ ಮತ್ತು ಪರಾಕ್ರಮದಲ್ಲಿ ಶ್ರೇಷ್ಠರಾಗಿದ್ದರೂ ಸಹ ಈ ಸ್ವರ್ಗನಿವಾಸಿಗಳನ್ನು ಪ್ರಭುವಿನ ಮುಂದೆ ದೂಷಿಸುವುದೂ ಇಲ್ಲ, ಖಂಡಿಸುವುದೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಸ್ವರ್ಗೀಯ ಜೀವಿಗಳ ವಿರೋಧವಾಗಿ ಕರ್ತದೇವರ ಮುಂದೆ ಇವರು ನ್ಯಾಯತೀರ್ಪನ್ನು ತರುವುದಿಲ್ಲ.