2 Peter 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
Kannada BSI Bible 2016
ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು.
Kannada Bible (KNCL) BSI 2016
ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.