2 Peter 2:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು.ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
Kannada BSI Bible 2016
ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ ಅವಮಾನಕ್ಕೂ ಕಾರಣರಾಗಿದ್ದಾರೆ.
Kannada Bible (KNCL) BSI 2016
ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯನ್ನು ಹಗಲಲ್ಲಿ ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಕಳಂಕಕ್ಕೂ, ನಿಂದೆಗೂ ಕಾರಣರಾಗಿದ್ದಾರೆ.