2 Peter 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತ ರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
Kannada BSI Bible 2016
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.
Kannada Bible (KNCL) BSI 2016
ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.