2 Peter 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
Kannada BSI Bible 2016
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅಧರ್ಮದಿಂದ ದೊರಕುವ ದ್ರವ್ಯವನ್ನು ಪ್ರೀತಿಸಿದನು;
Kannada Bible (KNCL) BSI 2016
ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.