2 Peter 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವನು ಮಾಡುತ್ತಿರುವುದು ತಪ್ಪೆಂದು ಒಂದು ಹೇಸರಕತ್ತೆಯು ಅವನಿಗೆ ತಿಳಿಸಿತು. ಅದು ಒಂದು ಮೂಕಪ್ರಾಣಿ. ಆದರೆ ಅದು ಮಾನವನಂತೆ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
Kannada BSI Bible 2016
ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನ ಅಕ್ರಮಕ್ಕೆ ಖಂಡನೆಯಾಯಿತು; ಮೂಕ ಪಶುವು ಮನುಷ್ಯಸ್ವರದಿಂದ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.
Kannada Bible (KNCL) BSI 2016
ಬಿಳಾಮನು ಅನೀತಿಯಿಂದ ಹಣಗಳಿಸಿದ ಲಾಭಕೋರ; ತನ್ನ ಅಕ್ರಮಕ್ಕೆ ತಕ್ಕ ದಂಡನೆಯನ್ನು ಅನುಭವಿಸಿದವನು. ಮೂಕ ಹೇಸರಗತ್ತೆಯೊಂದು ಮಾನವನಂತೆ ಮಾತಾಡಿ ಈ ಪ್ರವಾದಿಯ ಮೂರ್ಖತನಕ್ಕೆ ತಡೆಹಾಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನ ದುಷ್ಟತನಕ್ಕೆ ಖಂಡನೆಯಾಯಿತು. ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.