2 Peter 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸುಳ್ಳುಬೋಧಕರು ನೀರಿಲ್ಲದ ಒರತೆಗಳಂತಿದ್ದಾರೆ. ಅವರು ಬಿರುಗಾಳಿಯಿಂದ ಬಡಿದುಕೊಂಡು ಹೋಗುವ ಮೋಡಗಳಂತಿದ್ದಾರೆ. ಅವರಿಗಾಗಿ ಒಂದು ಕಗ್ಗತ್ತಲಾದ ಸ್ಥಳವನ್ನು ಕಾದಿರಿಸಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
Kannada BSI Bible 2016
ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮಂಜೂ ಆಗಿದ್ದಾರೆ; ಇಂಥವರ ಪಾಲಿಗೆ ಕಾರ್ಗತ್ತಲೆ ಇಟ್ಟಿರುವದು.
Kannada Bible (KNCL) BSI 2016
ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸುಳ್ಳು ಬೋಧಕರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ಕಾರ್ಗತ್ತಲು ಇಟ್ಟಿರುವುದು.