2 Peter 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.
Kannada BSI Bible 2016
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ.
Kannada Bible (KNCL) BSI 2016
ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥವರು ಸ್ವಾತಂತ್ರ್ಯಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ. ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತು ಹೋಗಿರುವನೋ, ಅವನು ಅದರ ದಾಸತ್ವದೊಳಗಿರುವನಷ್ಟೆ.