2 Peter 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಆ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
Kannada BSI Bible 2016
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
Kannada Bible (KNCL) BSI 2016
ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.