2 Peter 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ಆ ಜನರು ಸರಿಯಾದ ಮಾರ್ಗವನ್ನು ತಿಳಿಯದೆ ಹೋಗಿದ್ದರೇ ಒಳ್ಳೆಯದಾಗುತ್ತಿತ್ತು. ಸರಿಯಾದ ಮಾರ್ಗವನ್ನು ಅರಿತುಕೊಂಡು, ಪವಿತ್ರ ಬೋಧನೆಗಳಿಗೆ ವಿಮುಖರಾಗುವುದಕ್ಕಿಂತ ಅದನ್ನು ತಿಳಿದುಕೊಳ್ಳದಿದ್ದರೇ ಚೆನ್ನಾಗಿರುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
Kannada BSI Bible 2016
ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನೀತಿ ಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದಿದ್ದರೆ ಮೇಲಾಗಿತ್ತು.
Kannada Bible (KNCL) BSI 2016
ಅವರು ನೀತಿಯ ಮಾರ್ಗವನ್ನು ಅರಿತುಕೊಂಡು ತಾವು ಸ್ವೀಕರಿಸಿದ ಪವಿತ್ರ ಆಜ್ಞೆಯನ್ನು ತಿರಸ್ಕರಿಸುವುದಕ್ಕಿಂತ ಅದನ್ನು ಅರಿಯದವರಾಗಿದ್ದರೆ ಒಳ್ಳೆಯದಾಗುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನೀತಿಮಾರ್ಗವನ್ನು ತಿಳಿದುಕೊಂಡ ಮೇಲೆ ತಮಗೆ ಕೊಡಲಾದ ಪವಿತ್ರ ಆಜ್ಞೆಯಿಂದ ತೊಲಗಿ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.