2 Peter 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಜವಾಗಿ ಈ ಗಾದೆಗಳಂತೆಯೇ ಅವರು ಮಾಡಿದರು: “ನಾಯಿಯು ತಾನು ಕಕ್ಕಿದ್ದನ್ನೇ ನೆಕ್ಕಲು ತಿರುಗಿಕೊಂಡಿತು”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
Kannada BSI Bible 2016
ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳುವದಕ್ಕೆ ಹೋಯಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ನಡೆದಿದ್ದಾರೆ.
Kannada Bible (KNCL) BSI 2016
“ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹೋಯಿತು,” ಮತ್ತು “ಮೈ ತೊಳೆದ ಹಂದಿ ಕೊಳಚೆಯಲ್ಲಿ ಹೊರಳಲು ಹೋಯಿತು,” ಎಂಬ ಈ ಗಾದೆಗಳು ಇವರಿಗೆ ಸರಿಯಾಗಿ ಅನ್ವಯಿಸುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡಲು ತಿರುಗಿಕೊಂಡಿತು!” ಎಂಬ ನಿಜವಾದ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.