2 Peter 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
Kannada BSI Bible 2016
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.
Kannada Bible (KNCL) BSI 2016
ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.