2 Peter 2:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಈ ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಆ ಜನರಿಗೆ ತಿಳಿಸಿದವನೇ ನೋಹ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
Kannada BSI Bible 2016
ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.
Kannada Bible (KNCL) BSI 2016
ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.