2 Peter 2:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
(ಲೋಟನು ನೀತಿವಂತನಾಗಿದ್ದನು. ಆದರೆ ಅವನು ಪ್ರತಿದಿನವೂ ಆ ದುಷ್ಟಜನರ ಮಧ್ಯೆ ಜೀವಿಸುತ್ತಿದ್ದನು. ಕೆಟ್ಟಕಾರ್ಯಗಳನ್ನು ನೋಡಿ ಮತ್ತು ಕೇಳಿ ಅವನ ಒಳ್ಳೆಯ ಹೃದಯವು ವೇದನೆಗೆ ಒಳಗಾಗಿತ್ತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
Kannada BSI Bible 2016
ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ನೀತಿವಂತನು ಅವರ ನಡುವೆ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿವಿುತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ಕರಕರೆಗೊಂಡನು.
Kannada Bible (KNCL) BSI 2016
ಆತನು ಆ ದುರ್ಜನರ ನಡುವೆ ಬಾಳುತ್ತಾ ಅವರ ದುಷ್ಕೃತ್ಯಗಳನ್ನು ಕಂಡು ಕೇಳುತ್ತಿದ್ದಾಗ, ಅವನ ನಿರ್ಮಲ ಹೃದಯ ದಿನೇದಿನೇ ಅತೀವ ವೇದನೆಯನ್ನು ಅನುಭವಿಸುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ, ಕೇಳುತ್ತಾ, ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.