2 Peter 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮಗೆ ಹೇಳಿದಂತಹ ರೀತಿಯಲ್ಲಿಯೇ ಎಲ್ಲವೂ ನಾಶಗೊಳ್ಳುತ್ತವೆ. ಆದ್ದರಿಂದ ನೀವು ಎಂತಹ ಜನರಾಗಿರಬೇಕು? ನೀವು ಪರಿಶುದ್ಧರಾಗಿರಬೇಕು ಮತ್ತು ಭಕ್ತಿವುಳ್ಳವರಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
Kannada BSI Bible 2016
ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದರಿಂದ ನೀವು ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಹಾರೈಸುತ್ತಾ ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕಲ್ಲಾ; ಆ ದಿನದಲ್ಲಿ ಆಕಾಶಮಂಡಲವು ಬೆಂಕಿ ಹತ್ತಿ ಲಯವಾಗಿ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಕರಗಿ ಹೋಗುವವು.
Kannada Bible (KNCL) BSI 2016
ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.