2 Peter 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.
Kannada BSI Bible 2016
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
Kannada Bible (KNCL) BSI 2016
ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.