2 Peter 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.
Kannada BSI Bible 2016
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ಅಧರ್ಮಿಗಳ ಭ್ರಾಂತಿಯ ಸೆಳವಿಗೆ ಸಿಕ್ಕಿಕೊಂಡು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಟರಾಗದಂತೆ ಎಚ್ಚರಿಕೆಯಾಗಿರಿ.
Kannada Bible (KNCL) BSI 2016
ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ.