2 Peter 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರು, “ಆತನು ಮತ್ತೆ ಬರುವುದಾಗಿ ವಾಗ್ದಾನ ಮಾಡಿದ್ದನು. ಆತನು ಎಲ್ಲಿದ್ದಾನೆ? ನಮ್ಮ ಪಿತೃಗಳು ಸತ್ತುಹೋದರು. ಆದರೆ ಈ ಲೋಕವು ಆದಿಯಿಂದಲೂ ಇದ್ದ ರೀತಿಯಲ್ಲಿಯೇ ಇದೆ” ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.
Kannada BSI Bible 2016
ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆ ಹೊಂದಿದ ದಿನ ಮೊದಲುಗೊಂಡು ಸಮಸ್ತವೂ ಲೋಕಾದಿಯಿಂದಿದ್ದ ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳಬೇಕು.
Kannada Bible (KNCL) BSI 2016
ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?” ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು.