2 Peter 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಬಹಕಾಲದ ಹಿಂದೆ ಏನು ನಡೆಯಿತೆಂಬುದನ್ನು ನೆನಪು ಮಾಡಿಕೊಳ್ಳಲು ಅವರಿಗೆ ಇಷ್ಟವಿಲ್ಲ. ಆದಿಯಲ್ಲಿ ದೇವರು ಆಕಾಶವನ್ನು ಸೃಷ್ಟಿಸಿದನು. ದೇವರು ಲೋಕವನ್ನು ನೀರೊಳಗಿಂದ ಮತ್ತು ನೀರಿನಿಂದ ಸೃಷ್ಟಿಸಿದನು. ದೇವರ ವಾಕ್ಯದಿಂದ ಇವೆಲ್ಲಾ ಸಂಭವಿಸಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.
Kannada BSI Bible 2016
ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಮಾತಾಡುವವರು ಒಂದು ಸಂಗತಿಯನ್ನು ತಿಳಿದರೂ ಬೇಕೆಂದು ಮರೆತು ಬಿಡುತ್ತಾರೆ; ಅದೇನಂದರೆ - ಪೂರ್ವಕಾಲದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನಿಂದ ಉಂಟಾಗಿ ನೀರಿನಿಂದ ಆಧಾರಗೊಂಡಿರುವಲ್ಲಿ
Kannada Bible (KNCL) BSI 2016
ಆದರೆ, ಅವರು ಒಂದು ವಿಷಯವನ್ನು ಉದ್ದೇಶಪೂರ್ವಕವಾಗಿ ಮರೆತುಬಿಡುತ್ತಾರೆ. ಅದೇನೆಂದರೆ, ಪ್ರಾರಂಭದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದಿಂದಲೇ ಉಂಟಾದವು. ಜಲದಿಂದ, ಜಲದ ಮೂಲಕ ಭೂಮಿ ಉಂಟಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೂರ್ವಕಾಲದಲ್ಲಿ ದೇವರ ವಾಕ್ಯದಿಂದ ಆಕಾಶವು ಅಸ್ತಿತ್ವಕ್ಕೆ ಬಂದಿತು ಎಂತಲೂ ಜಲದಿಂದ ಜಲದ ಮೂಲಕ ಭೂಮಿಯು ಉಂಟಾಯಿತೆಂಬುದನ್ನು ಅವರು ಬೇಕೆಂತಲೇ ಮರೆತುಬಿಡುತ್ತಾರೆ.