2 Peter 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
Kannada BSI Bible 2016
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ ಸಿದ್ಧವಾಗಿದೆ.
Kannada Bible (KNCL) BSI 2016
ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.