2 Samuel 1:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ದಾವೀದನು ತನ್ನ ಗುಂಪಿನ ಯುವಕನೊಬ್ಬನನ್ನು ಕರೆದು, “ನೀನು ಹೋಗಿ ಆ ಅಮಾಲೇಕ್ಯನನ್ನು ಕೊಲ್ಲು” ಎಂದು ಹೇಳಿದನು. ಇಸ್ರೇಲರ ಯುವಕನು ಆ ಅಮಾಲೇಕ್ಯನನ್ನು ಕೊಂದುಬಿಟ್ಟನು. ದಾವೀದನು ಆ ಅಮಾಲೇಕ್ಯನಿಗೆ, “ನಿನ್ನ ಸಾವಿಗೆ ನೀನೇ ಕಾರಣನು. ನೀನು ನಿನ್ನ ವಿರುದ್ಧವೇ ಸಾಕ್ಷಿ ಹೇಳಿದೆ. ‘ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ನಾನು ಕೊಂದೆ’ ಎಂದು ನೀನೇ ಹೇಳಿದೆ” ಎಂದನು. (Verses 15-16)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಹೋಗಿ ಇವನನ್ನು ಕೊಂದುಹಾಕು” ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು.
Kannada BSI Bible 2016
ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು - ಇವನ ಮೇಲೆ ಬಿದ್ದು ಹೊಡಿ ಎಂದು ಆಜ್ಞಾಪಿಸಲು ಅವನು ಇವನನ್ನು ಹೊಡೆದು ಕೊಂದನು.
Kannada Bible (KNCL) BSI 2016
ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಇವನನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ಇವನನ್ನು ಹೊಡೆದು ಕೊಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುವಕರಲ್ಲಿ ಒಬ್ಬನನ್ನು ಕರೆದು, “ನೀನು ಇವನನ್ನು ಕೊಲ್ಲು,” ಎಂದನು. ಹಾಗೆಯೇ ಅವನು ಅವನನ್ನು ಹೊಡೆದು ಕೊಂದನು.