2 Samuel 1:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಶೋಕಗೀತೆಯನ್ನು ಯೆಹೂದದ ಜನರಿಗೆ ಕಲಿಸಬೇಕೆಂದು ಅವನು ತನ್ನ ಜನರಿಗೆ ಹೇಳಿದನು. ಈ ಗೀತೆಗೆ “ಬಿಲ್ಲು” ಎಂದು ಹೆಸರು. ಈ ಗೀತೆಯನ್ನು ಯಾಷಾರ್ ಗ್ರಂಥದಲ್ಲಿ ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ.
Kannada BSI Bible 2016
ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಈ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ -
Kannada Bible (KNCL) BSI 2016
‘ಬಿಲ್ಲೆ’ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಇದರ ಉಲ್ಲೇಖ ‘ಯಾಷಾರ್’ ಎಂಬ ಗ್ರಂಥದಲ್ಲಿದೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದಾವೀದನು ಬಿಲ್ಲೆ ಎಂಬ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಹೇಳಿದನು. ಇದು ಯಾಷಾರನ ಗ್ರಂಥದಲ್ಲಿ ಬರೆಯಲಾಗಿದೆ: