2 Samuel 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರನೆಯ ದಿನ ಒಬ್ಬ ಯುವ ಸೈನಿಕನು ಚಿಕ್ಲಗಿಗೆ ಬಂದನು. ಈ ಮನುಷ್ಯನು ಸೌಲನಿದ್ದ ಪಾಳೆಯದಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು. ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿಸಿ ನಮಸ್ಕರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.
Kannada BSI Bible 2016
ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.
Kannada Bible (KNCL) BSI 2016
ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.