2 Samuel 1:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗತ್‌ನಲ್ಲಿ ಈ ಸುದ್ದಿಯನ್ನು ಹೇಳದಿರು. ಅಷ್ಕೆಲೋನಿನ ಬೀದಿಗಳಲ್ಲಿ ಇದನ್ನು ಸಾರದಿರು. ಫಿಲಿಷ್ಟಿಯರ ಪಟ್ಟಣಗಳೆಲ್ಲಾ ಸಂತೋಷಪಡುವವು. ಆ ವಿದೇಶಿಯರ ಹೆಣ್ಣುಮಕ್ಕಳು ಉಲ್ಲಾಸಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.
Kannada BSI Bible 2016
ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು; ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಿಸಾರು.
Kannada Bible (KNCL) BSI 2016
ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು.