2 Samuel 1:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೋದರನಾದ ಯೋನಾತಾನನೇ, ನಿನಗಾಗಿ ನಾನು ದುಃಖಿಸುವೆ! ನಿನ್ನ ಗೆಳೆತನವು ನನಗೆ ಉಲ್ಲಾಸದಾಯಕವಾಗಿತ್ತು. ನನ್ನ ಮೇಲಿನ ನಿನ್ನ ಪ್ರೀತಿಯು ಸ್ತ್ರೀಯರ ಪ್ರೀತಿಗಿಂತಲೂ ಅತಿಶಯವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.
Kannada BSI Bible 2016
ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನಾತಾನನೇ, ನನ್ನ ಸಹೋದರನೇ, ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ; ನೀನು ನನಗೆ ಬಹುಮನೋಹರನಾಗಿದ್ದಿ. ನನ್ನ ಮೇಲಿದ್ದ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದೇ ಸರಿ; ಅದು ಸತೀಪ್ರೇಮಕ್ಕಿಂತ ಶ್ರೇಷ್ಠವಾದದ್ದು.
Kannada Bible (KNCL) BSI 2016
ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ, ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸಹೋದರನಾದ ಯೋನಾತಾನನೇ, ನಾನು ನಿನಗೋಸ್ಕರ ಶೋಕಿಸುತ್ತೇನೆ. ನೀನು ನನಗೆ ಬಹಳ ಮನೋಹರನಾಗಿದ್ದಿ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯಕರವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.