2 Samuel 1:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಅವನನ್ನು, “ಯುದ್ಧದಲ್ಲಿ ಯಾರು ಗೆದ್ದರು, ನನಗೆ ದಯವಿಟ್ಟು ತಿಳಿಸು?” ಎಂದು ಕೇಳಿದನು. ಅವನು, “ಇಸ್ರೇಲ್ ಜನರು ಯುದ್ಧರಂಗದಿಂದ ಓಡಿಹೋದರು. ಯುದ್ಧದಲ್ಲಿ ಅನೇಕರು ಸತ್ತುಹೋದರು. ಸೌಲನು ಮತ್ತು ಅವನ ಮಗನಾದ ಯೋನಾತಾನನೂ ಸತ್ತರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು, “ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು” ಅನ್ನಲು ಆ ಮನುಷ್ಯನು, “ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು” ಎಂದು ತಿಳಿಸಿದನು.
Kannada BSI Bible 2016
ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು - ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು ಅನ್ನಲು ಆ ಮನುಷ್ಯನು - ಇಸ್ರಾಯೇಲ್ಯರು ರಣರಂಗದಿಂದ ಓಡಿಹೋದರು. ಅನೇಕರು ಮಡಿದರು. ಸೌಲನೂ ಅವನ ಮಗನಾದ ಯೋನಾತಾನನೂ ಮೃತಿ ಹೊಂದಿದರು ಎಂದು ತಿಳಿಸಿದನು.
Kannada Bible (KNCL) BSI 2016
ಆಗ ದಾವೀದನು, “ಏನಾಯಿತೆಂದು ತಿಳಿಸು,” ಎನ್ನಲು ಆ ವ್ಯಕ್ತಿ, “ಇಸ್ರಯೇಲರು ರಣರಂಗದಿಂದ ಓಡಿಹೋದರು; ಅನೇಕರು ಮಡಿದರು. ಸೌಲನೂ ಅವನ ಮಗ ಯೋನಾತಾನನೂ ಮರಣಹೊಂದಿದರು,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಅವನಿಗೆ, “ನಡೆದ ವರ್ತಮಾನವೇನು? ನೀನು ನನಗೆ ತಿಳಿಸು,” ಎಂದನು. ಅವನು, “ಜನರು ಯುದ್ಧದಿಂದ ಓಡಿಹೋದರು. ಜನರಲ್ಲಿ ಅನೇಕರು ಸತ್ತರು. ಸೌಲನೂ, ಅವನ ಮಗ ಯೋನಾತಾನನೂ ಸತ್ತರು,” ಎಂದನು.