2 Samuel 10:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ತಮ್ಮನ್ನು ಸೋಲಿಸಿದರೆಂಬುದನ್ನು ಅರಾಮ್ಯರು ತಿಳಿದುಕೊಂಡರು. ಆದ್ದರಿಂದ ಅವರೆಲ್ಲರೂ ಒಟ್ಟಾಗಿ ಸೇರಿ ಒಂದು ದೊಡ್ಡ ಸೈನ್ಯವನ್ನು ಕಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.
Kannada BSI Bible 2016
ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಕೂಡಿಬಂದರು.
Kannada Bible (KNCL) BSI 2016
ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾದಾಗ ಅವರೆಲ್ಲರೂ ಕೂಡಿಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು.