2 Samuel 10:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೂಫ್ರೇಟೀಸ್ ನದಿಯ ಮತ್ತೊಂದು ತೀರದಲ್ಲಿ ವಾಸಿಸುತ್ತಿದ್ದ ಅರಾಮ್ಯರನ್ನು ಕರೆತರಲು ಹದದೆಜೆರನು ಸಂದೇಶಕರನ್ನು ಕಳುಹಿಸಿದನು. ಈ ಅರಾಮ್ಯರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
Kannada BSI Bible 2016
ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹದದೆಜೆರನು ಯೂಫ್ರೇಟೀಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೇಕಳುಹಿಸಿದನು; ಅವರು ಹೇಲಾವಿುಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.
Kannada Bible (KNCL) BSI 2016
ಹದದೆಜೆರನು ಯೂಫ್ರಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಬರಮಾಡಿದನು; ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹದದೆಜೆರನು ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡದ್ದರಿಂದ ಅವರು ಹೆಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.