2 Samuel 10:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮ್ಮೋನಿಯರು ತಮ್ಮ ವಿರುದ್ಧವಾಗಿ ಹಿಂದೆ ಮತ್ತು ಮುಂದೆ ನಿಂತಿರುವುದನ್ನು ನೋಡಿದ ಯೋವಾಬನು ಇಸ್ರೇಲರಲ್ಲಿ ಶ್ರೇಷ್ಠರಾದವರನ್ನು ಆರಿಸಿಕೊಂಡು ಅರಾಮ್ಯರ ವಿರುದ್ಧ ಯುದ್ಧಮಾಡಲು ಅವರನ್ನು ಸಾಲಾಗಿ ನಿಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
Kannada BSI Bible 2016
ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
Kannada Bible (KNCL) BSI 2016
ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಯೇಲರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು ಅವರನ್ನು ಸಿರಿಯಾದವರಿಗೆ ವಿರುದ್ಧ ನಿಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.