2 Samuel 11:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಊರೀಯನಿಗೆ, “ಈ ದಿನ ಇಲ್ಲಿಯೇ ಇರು. ನಾಳೆ ನಿನ್ನನ್ನು ಯುದ್ಧಕ್ಕೆ ಕಳುಹಿಸುತ್ತೇನೆ” ಎಂದು ಹೇಳಿದನು. ಊರೀಯನು ಅಂದು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಅಂದರೆ ಮಾರನೆಯ ದಿನದ ಬೆಳಗಿನವರೆಗೆ ಅಲ್ಲೇ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ಅವನಿಗೆ, “ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ” ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು.
Kannada BSI Bible 2016
ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ಅವನಿಗೆ - ನೀನು ಈ ಹೊತ್ತು ಇಲ್ಲೇ ಇರು, ನಾಳೆ ನಿನ್ನನ್ನು ಕಳುಹಿಸುತ್ತೇನೆ ಎಂದು ಆಜ್ಞಾಪಿಸಿದನು. ಆದದರಿಂದ ಊರೀಯನು ಆ ದಿನ ಯೆರೂಸಲೇವಿುನಲ್ಲೇ ಇದ್ದನು.
Kannada Bible (KNCL) BSI 2016
ಆಗ ದಾವೀದನು, “ಹಾಗಾದರೆ ನೀನು ಈ ಹೊತ್ತು ಇಲ್ಲೇ ಇರು; ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದು ಆಜ್ಞಾಪಿಸಿದನು. ಅಂತೆಯೇ ಊರೀಯನು ಆ ದಿನ ಜೆರುಸಲೇಮಿನಲ್ಲೇ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಊರೀಯನಿಗೆ, “ಈ ಹೊತ್ತು ಇಲ್ಲಿರು. ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಊರೀಯನೂ ಆ ದಿನವೂ, ಮಾರನೆಯ ದಿವಸವೂ ಯೆರೂಸಲೇಮಿನಲ್ಲಿ ಇದ್ದನು.