2 Samuel 11:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದಾವೀದನು ತನ್ನನ್ನು ಬಂದು ಕಾಣುವಂತೆ ಊರೀಯನಿಗೆ ಹೇಳಿ ಕಳುಹಿಸಿದನು; ಊರೀಯನು ದಾವೀದನೊಂದಿಗೆ ಕುಡಿದು ಊಟ ಮಾಡಿದನು. ದಾವೀದನು ಊರೀಯನನ್ನು ಮತ್ತನನ್ನಾಗಿ ಮಾಡಿದನು. ಆದರೂ ಊರೀಯನು ಮನೆಗೆ ಹೋಗಲಿಲ್ಲ. ಅಂದು ಸಂಜೆ ರಾಜನ ಮನೆಯ ಹೊರಬಾಗಿಲಿನಲ್ಲಿ ಸೇವಕರೊಂದಿಗೆ ಮಲಗಲು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.
Kannada BSI Bible 2016
ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ದಾವೀದನು ಅವನನ್ನು ಅನ್ನಪಾನತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರಕೊಂಡುಹೋಗಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.
Kannada Bible (KNCL) BSI 2016
ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು.