2 Samuel 11:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಆ ಪತ್ರದಲ್ಲಿ, “ಯುದ್ಧವು ಹೆಚ್ಚು ಭೀಕರವಾಗಿ ನಡೆಯುವ ಕಡೆ ಊರೀಯನನ್ನು ಮುಂದಿನ ಸಾಲಿನಲ್ಲಿ ನಿಲ್ಲಿಸು. ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡಿ. ಅವನು ಯುದ್ಧದಲ್ಲಿ ಕೊಲ್ಲಲ್ಪಡಲಿ” ಎಂದು ಬರೆದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ, “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ” ಎಂಬುದಾಗಿ ಬರೆದಿದ್ದನು.
Kannada BSI Bible 2016
ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿದ್ದದ್ದೇನಂದರೆ - ಊರೀಯನು ಗಾಯಹೊಂದಿ ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆಗೆ ಮುಂಭಾಗದಲ್ಲಿ ನಿಲ್ಲಿಸಿ ನೀವು ಹಿಂದಕ್ಕೆ ಸರಿದುಕೊಳ್ಳಿರಿ ಎಂಬದೇ.
Kannada Bible (KNCL) BSI 2016
ಅದರಲ್ಲಿ ಹೀಗೆ ಬರೆಯಲಾಗಿತ್ತು: “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆ, ಮುಂಭಾಗದಲ್ಲೇ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪತ್ರದಲ್ಲಿ, “ಊರೀಯನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂದೆ ನಿಲ್ಲಿಸಿ, ಅವನು ಗಾಯಗೊಂಡು ಸಾಯುವಂತೆ, ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿದುಕೊಳ್ಳಿರಿ,” ಎಂದು ಬರೆದಿದ್ದನು.