2 Samuel 11:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋವಾಬನ ವಿರುದ್ಧ ಹೋರಾಡಲು ಆ ನಗರದ ಜನರು ಹೊರಗೆ ಬಂದು ದಾವೀದನ ಕೆಲವು ಜನರನ್ನು ಕೊಂದರು. ಹಿತ್ತಿಯನಾದ ಊರೀಯನೂ ಅವರಲ್ಲೊಬ್ಬನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು.
Kannada BSI Bible 2016
ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಮಡಿದನು.
Kannada Bible (KNCL) BSI 2016
ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು; ಹಿತ್ತಿಯನಾದ ಊರೀಯನೂ ಮಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣದ ಮನುಷ್ಯರು ಹೊರಟು ಯೋವಾಬನ ಸಂಗಡ ಯುದ್ಧಮಾಡುವಾಗ, ದಾವೀದನ ಸೇವಕರಾದವರಲ್ಲಿ ಕೆಲವರು ಸತ್ತರು. ಇದಲ್ಲದೆ ಹಿತ್ತಿಯನಾದ ಊರೀಯನೂ ಸತ್ತನು.