2 Samuel 11:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.
Kannada BSI Bible 2016
ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಂದು ದಿವಸ ಸಂಜೇ ಹೊತ್ತಿನಲ್ಲಿ ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿರುವಾಗ ಅಲ್ಲಿಂದ ಬಹುಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವದನ್ನು ಕಂಡನು.
Kannada Bible (KNCL) BSI 2016
ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.