2 Samuel 11:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಯಾರು ಕೊಂದರೆಂಬುದು ನಿಮಗೆ ಗೊತ್ತಿಲ್ಲವೇ? ಅಬೀಮೆಲೆಕನ ಮೇಲೆ ಬೀಸುವ ಕಲ್ಲನ್ನು ನಗರದ ಗೋಡೆಯ ಮೇಲಿನಿಂದ ಎಸೆದವಳು ತೇಬೇಚಿನ ಒಬ್ಬ ಹೆಂಗಸಲ್ಲವೇ? ನೀವು ಗೋಡೆಯ ಹತ್ತಿರಕ್ಕೆ ಏಕೆ ಹೋದಿರಿ?’ ಎಂದು ಹೇಳಬಹುದು. ಆಗ ನೀನು, ‘ಹಿತ್ತಿಯನಾದ ನಿನ್ನ ಸೇವಕ ಊರೀಯನು ಸಹ ಸತ್ತುಹೋದನು’ ಎಂದು ಉತ್ತರಿಸಬೇಕು” ಎಂದು ಹೇಳಿ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.
Kannada BSI Bible 2016
ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಣಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇನು ಎಂದು ಕೇಳಿದರೆ ನೀನು - ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮೃತಿಹೊಂದಿದನೆಂದು ಹೇಳು ಎಂಬದಾಗಿ
Kannada Bible (KNCL) BSI 2016
ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೇ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ? ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ‘ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮೃತನಾದನೆಂದು ಹೇಳು,’ ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ‍್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.