2 Samuel 11:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಗರದ ಗೋಡೆಯ ಮೇಲಿದ್ದ ಜನರು ನಿಮ್ಮ ಸೈನಿಕರ ಮೇಲೆ ಬಾಣಗಳನ್ನು ಎಸೆದರು. ನಿಮ್ಮ ಸೈನಿಕರಲ್ಲಿ ಕೆಲವರನ್ನು ಕೊಂದರು. ಹಿತ್ತಿಯನಾದ ನಿಮ್ಮ ಸೈನಿಕ ಊರೀಯನೂ ಸಹ ಸತ್ತುಹೋದನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು.
Kannada BSI Bible 2016
ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬಿಲ್ಲುಗಾರರು ಗೋಡೆಯ ಮೇಲಣಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮಡಿದನು ಎಂಬದೇ.
Kannada Bible (KNCL) BSI 2016
ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿಮ್ಮ ಸೇವಕರ ಮೇಲೆ ಬಾಣಗಳನ್ನು ಎಸೆದುದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮಡಿದನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು.