2 Samuel 11:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳು ತನ್ನ ಶೋಕಕಾಲವನ್ನು ಮುಗಿಸಿದ ನಂತರ, ಅವಳನ್ನು ತನ್ನ ಮನೆಗೆ ಕರೆತರಲು ದಾವೀದನು ಸೇವಕರನ್ನು ಕಳುಹಿಸಿದನು. ಅವಳು ದಾವೀದನ ಪತ್ನಿಯಾದಳು. ಅವಳು ದಾವೀದನಿಂದ ಒಂದು ಗಂಡುಮಗುವಿಗೆ ಜನ್ಮನೀಡಿದಳು. ದಾವೀದನು ಮಾಡಿದ ಈ ಕೆಟ್ಟಕಾರ್ಯವು ಯೆಹೋವನಿಗೆ ದುಃಖವನ್ನುಂಟುಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.
Kannada BSI Bible 2016
ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು; ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.
Kannada Bible (KNCL) BSI 2016
ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.