2 Samuel 11:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ತನ್ನ ಸೇವಕರನ್ನು ಕರೆದು ಅವಳು ಯಾರೆಂದು ಕೇಳಿದನು. ಒಬ್ಬ ಸೇವಕನು, “ಅವಳು ಎಲೀಯಾಮನ ಮಗಳಾದ ಬತ್ಷೆಬೆಳು. ಹಿತ್ತಿಯನಾದ ಊರೀಯನ ಹೆಂಡತಿ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು.
Kannada BSI Bible 2016
ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಲು ಅವನು - ಆಕೆಯು ಎಲೀಯಾಮನ ಮಗಳೂ ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆಯಲ್ಲವೋ ಎಂದು ಉತ್ತರ ಕೊಟ್ಟನು.
Kannada Bible (KNCL) BSI 2016
ಕೂಡಲೆ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಿದನು. ಅವನು, “ಆಕೆ ಎಲೀಯಾಮನ ಮಗಳೂ ಹಿತ್ತಿಯನಾದ ಊರೀಯನ ಹೆಂಡತಿಯೂ ಆದ ಬತ್ಷೆಬೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತ್ರೀಯು ಬಹು ಸೌಂದರ್ಯವುಳ್ಳ ರೂಪವತಿಯಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವುದಕ್ಕೆ ಕಳುಹಿಸಿದಾಗ ಒಬ್ಬನು, “ಅವಳು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಬತ್ಷೆಬೆಳು,” ಎಂದನು.